


ದಿನಾಂಕ 06-04-2022 ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ 2021-22 ನೇ ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಕೆ.ವಿ. ಹೇಮನಾಥ್ ವಹಿಸಿದ್ದರು. ಕರ್ನಾಟಕ ಸರಕಾರದ ಅಡಿಶನಲ್ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ರವರು ಮುಖ್ಯ ಅತಿಥಿಗಳ ನೆಲೆಯಿಂದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪೆÇ್ರೀ. ಉದಯಕೃಷ್ಣ. ಬಿ, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಡೀನ್ ನೀಲಾಂಬಿಕ ನಟರಾಜನ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಉಪನ್ಯಾಸಕಿ ಟೀನಾ. ಹೆಚ್.ಎಸ್ ಮತ್ತು ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ಟೀನಾ.ಹೆಚ್. ಎಸ್ ಪ್ರಮಾಣವಚನ ಬೋಧಿಸಿದರು.
ವಿದ್ಯಾರ್ಥಿನಿ ಲಾವಣ್ಯ ಪ್ರಾರ್ಥಿಸಿದರು. ಪ್ರಾಂಶುಪಾಲರಾದ ಪೆÇ್ರ. ಉದಯಕೃಷ್ಣ. ಬಿ, ಸ್ವಾಗತಿಸಿ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷ ಪ್ರತಾಪ್ ವಂದಿಸಿದರು. ಉಪನ್ಯಾಸಕ ರಂಜನ್ ಕಾರ್ಯಕ್ರಮ ನಿರೂಪಿಸಿದರು.