ದಿನಾಂಕ 02-09-2022 ರಂದು ಕೆ.ವಿ.ಜಿ ಕಾನೂನು ಕಾಲೇಜಿನಲ್ಲಿ ಓಣಂ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಉದಯಕøಷ್ಣ ಬಿ. ವಹಿಸಿ, ಓಣಂ ಹಬ್ಬದ ಆಚರಣೆಯ ಮಹತ್ವದ ಕುರಿತು ಮಾತನಾಡುತ್ತಾ ವಿವಿಧತೆಯಲ್ಲಿ ಏಕತೆಯನ್ನು ಸಾರಲು ಆಚರಣೆಗಳು ಅವಶ್ಯಕ ಎಂದರು. ಮುಖ್ಯ ಅತಿಥಿಗಳಾದ ಹಿರಿಯ ಉಪನ್ಯಾಸಕ ಜಯರಾಮ್ ವೈ ಹಾಗೂ ಕಾಲೇಜಿನ ವಿಧ್ಯಾರ್ಥಿ ಕ್ಷೇಮಾಧಿಕಾರಿ ಟೀನಾ ಹೆಚ್.ಎಸ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿಧ್ಯಾರ್ಥಿನಿ ಅನಘಾ ಓಣಂ ಹಬ್ಬದ ಆಚರಣೆಯ ಬಗ್ಗೆ ಮಾತನಾಡಿದರು. ವಿದ್ಯಾರ್ಥಿ ಅನೀಶ ಪ್ರಾರ್ಥಿಸಿದರು. ಅರ್ಪಿತಾ ಸ್ವಾಗತಿಸಿ, ವಿದ್ಯಾರ್ಥಿ ಕಾರ್ತಿಕ್ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ವಿವಿಧ ಸ್ವರ್ಧೆಗಳು ಹಾಗೂ ಮನೋರಂಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿಧ್ಯಾರ್ಥಿನಿಯರಾದ ಮಾನಸ ಮತ್ತು ಫಮೀದ ಕಾರ್ಯಕ್ರಮವನ್ನು ಆಯೋಜಿಸಿದರು.
