


ದಿನಾಂಕ ೦೩-೦೧-೨೦೨೪ರಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದಲ್ಲಿ ಎನ್.ಎಸ್.ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಪ್ರೋ. ಉದಯಕೃಷ್ಣ. ಬಿ ವಹಿಸಿದ್ದರು. ಉದ್ಘಾಟಕರಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಸುಳ್ಯ ಇದರ ಅಧ್ಯಕ್ಷರಾದ ಪಿ.ಬಿ. ಸುಧಾಕರ ರೈ, ಮುಖ್ಯ ಅತಿಥಿಗಳಾಗಿ ಜಿಲ್ಲಾ ರೆಡ್ ಕ್ರಾಸ್ ಪ್ರತಿನಿಧಿ ಗಣೇಶ್ ಭಟ್ ಮತ್ತು ಡಾ. ಅನುರಾಧ ಕುರುಂಜಿ, ಸಹಾಯಕ ಪ್ರಾಧ್ಯಾಪಕಿ ನೆಹರೂ ಸ್ಮಾರಕ ಮಹಾವಿದ್ಯಾಲಯ ಸುಳ್ಯ ಇವರು ಉಪಸ್ಥಿತರಿದ್ದರು. ವೇದಿಕೆಯಲ್ಲಿ ಎನ್.ಎನ್.ಎಸ್ ಘಟಕದ ಸಂಯೋಜನಾಧಿಕಾರಿ ಶ್ರೀಮತಿ ಕಲಾವತಿ. ಎಮ್, ಯುವ ರೆಡ್ಕ್ರಾಸ್ ಘಟಕದ ಸಂಯೋಜನಾಧಿಕಾರಿ ಶ್ರೀಮತಿ ಆರ್ಚನಾ. ಆರ್ ರೈ ಹಾಗೂ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋದಕ, ಬೋಧಕೇತರ ಸಿಬ್ಬಂದಿ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಕವನ ಮತ್ತು ಅಂಜಲಿ ಪ್ರಾರ್ಥಿಸಿ ಉಪನ್ಯಾಸಕಿ ಕಲಾವತಿ. ಎಮ್ ಸ್ವಾಗತಿಸಿ, ಆರ್ಚನಾ ಆರ್ ರೈ ವಂದಿಸಿದರು. ವಿದ್ಯಾರ್ಥಿನಿ ವೃಂದಾ ಪ್ರಕಾಶ್ ಕಾರ್ಯಕ್ರಮ ನಿರೂಪಿಸಿದರು.