ಕೆ.ವಿ.ಜಿ ಕಾನೂನು ಕಾಲೇಜಿನ ರಾಷ್ಟೀಯ ಸೇವಾ ಯೋಜನಾ ಘಟಕದ ವತಿಯಿಂದ ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಒಂದು ದಿನದ ಕಾನೂನು ಮಾಹಿತಿ ಸಮೀಕ್ಷೆಯನ್ನು ದಿನಾಂಕ ೦೩-೦೩-೨೦೨೩ರಂದು ನಡೆಸಲಾಯಿತು. ಎನ್.ಎನ್.ಎಸ್ ಘಟಕದ ಸಂಯೋಜಕರಾದ ರಂಜನ್. ಕೆ.ಎನ್ ಇವರ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಪ್ರಾಂಶುಪಾಲರು ಈ ಸಮೀಕ್ಷೆಯಲ್ಲಿ ಪಾಲ್ಗೊಂಡು ಗ್ರಾಮಸ್ಧರ ಅಹವಾಲುಗಳನ್ನು ಸ್ವೀಕರಿಸಿದರು.